cinemirrorworld.com

ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ: ಸತತ ಮೂರನೇ ಬಾರಿ ಕಿರೀಟ

March 9, 2026 | by Cine Mirror World

ಮಾರ್ಚ್ 8, 2026 ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಮರೆಯಲಾಗದ ದಿನವಾಗಿ ಉಳಿದಿದೆ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನವೇ ಭಾರತ ಕ್ರಿಕೆಟ್ ತಂಡವು ಭರ್ಜರಿ ಪ್ರದರ್ಶನ ನೀಡಿ ಸತತ ಮೂರನೇ ಬಾರಿ ಟಿ20 ವಿಶ್ವಕಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಈ ಅದ್ಭುತ ಗೆಲುವು ದೇಶದ ಅಭಿಮಾನಿಗಳಲ್ಲಿ ಅಪಾರ ಸಂತಸ ಮೂಡಿಸಿದೆ.

ಆಟಗಾರರ ನಡುವೆ ಉತ್ತಮ ಸಮನ್ವಯ, ಶಿಸ್ತು, ನಿರಂತರ ಅಭ್ಯಾಸ ಮತ್ತು ಅತ್ಯುತ್ತಮ ಪ್ರದರ್ಶನವೇ ಈ ಐತಿಹಾಸಿಕ ಗೆಲುವಿನ ಪ್ರಮುಖ ಕಾರಣವಾಗಿದೆ.

ಭಾರತ ತಂಡವು ಮೊದಲ ಬಾರಿ 2007ರಲ್ಲಿ ನಾಯಕ ಎಂ.ಎಸ್. ಧೋನಿ ಅವರ ನಾಯಕತ್ವದಲ್ಲಿ ಪಾಕಿಸ್ತಾನ ತಂಡವನ್ನು ಸೋಲಿಸಿ ಚೊಚ್ಚಲ ಟಿ20 ವಿಶ್ವಕಪ್ ಜಯಿಸಿತ್ತು. ನಂತರ 2024ರಲ್ಲಿ ನಾಯಕ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಮತ್ತೊಮ್ಮೆ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿತ್ತು. ಈಗ 2026ರಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಅವರ ನಾಯಕತ್ವದಲ್ಲಿ ಟೀಂ ಇಂಡಿಯಾ ಮತ್ತೆ ಟ್ರೋಫಿಯನ್ನು ಗೆದ್ದು ಇತಿಹಾಸ ನಿರ್ಮಿಸಿದೆ.

ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು ಭರ್ಜರಿ ಪ್ರದರ್ಶನ ನೀಡಿತು.

ಟೀಂ ಇಂಡಿಯಾದ ಪರ ಸಂಜು ಸ್ಯಾಮ್ಸನ್ 89 ರನ್, ಅಭಿಷೇಕ್ ಶರ್ಮಾ 52 ರನ್ ಮತ್ತು ಇಶಾನ್ ಕಿಶನ್ 54 ರನ್ ಗಳಿಸಿದರು. ಈ ಮೂರು ಅರ್ಧಶತಕಗಳ ನೆರವಿನಿಂದ ಭಾರತ ತಂಡವು 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್ ಗಳ ಭಾರೀ ಮೊತ್ತವನ್ನು ಕಲೆಹಾಕಿತು.

ನಂತರ ಬ್ಯಾಟಿಂಗ್‌ಗೆ ಇಳಿದ ನ್ಯೂಜಿಲೆಂಡ್ ತಂಡವು ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿತು. ಕೇವಲ 72 ರನ್ ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿತು. ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿದ ನ್ಯೂಜಿಲೆಂಡ್ ತಂಡವು 19 ಓವರ್‌ಗಳಲ್ಲಿ 159 ರನ್‌ಗಳಿಗೆ ಆಲ್ ಔಟ್ ಆಯಿತು.

ಭಾರತದ ಪರ ಮಾರಕ ಬೌಲಿಂಗ್ ಮಾಡಿದ ಜಸ್‌ಪ್ರೀತ್ ಬುಮ್ರಾ 4 ಓವರ್‌ಗಳಲ್ಲಿ 4 ವಿಕೆಟ್ ಪಡೆದು ಮಿಂಚಿದರು. ಅವರ ಅದ್ಭುತ ಪ್ರದರ್ಶನದ ಫಲವಾಗಿ ಭಾರತ ತಂಡವು 96 ರನ್‌ಗಳ ಭರ್ಜರಿ ಗೆಲುವು ಸಾಧಿಸಿತು.

ಈ ಗೆಲುವಿನೊಂದಿಗೆ ಟೀಂ ಇಂಡಿಯಾ ವಿಶ್ವಕಪ್ ಟ್ರೋಫಿಯ ಜೊತೆಗೆ ಕೋಟ್ಯಾಂತರ ರೂಪಾಯಿ ಬಹುಮಾನವನ್ನು ಪಡೆಯಲಿದೆ. ಪಂದ್ಯದಲ್ಲಿ 4 ವಿಕೆಟ್ ಪಡೆದ ಬುಮ್ರಾ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ದೊರೆಯಿತು.

ಟೀಂ ಇಂಡಿಯಾದ ಈ ಐತಿಹಾಸಿಕ ಗೆಲುವಿಗೆ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಭಿನಂದನೆಗಳನ್ನು ತಿಳಿಸಿದ್ದಾರೆ. ಜೊತೆಗೆ ವಿಶ್ವದ ವಿವಿಧ ದೇಶಗಳಿಂದಲೂ ಟೀಂ ಇಂಡಿಯಾಗೆ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ.

RELATED POSTS

View all

view all